Sunday, 15th December 2024

ಮೂರು ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮೂರು ಗ್ರಾಮ ಪಂಚಾಯಿತಿಗಳು, ವಿವಿಧ ಕಾರಣಗಳಿಗೆ ತೆರವಾಗಿರುವ 201 ಗ್ರಾಪಂ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.

ಮೇ 5ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 20ಕ್ಕೆ ಮತದಾನ ನಡೆಯಲಿದ್ದು, ಮೇ 22ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಧಾರವಾಡ ಜಿಲ್ಲೆ ಕುಂದಗೊಳ ತಾಲೂಕಿನ 14 ಸದಸ್ಯ ಬಲದ ಚಾಕಲಬ್ಬಿ ಗ್ರಾಪಂ ಚುನಾ ಯಿತ ಮಂಡಳಿ ಅವಧಿ 2022ರ ಜುಲೈಗೆ ಮುಕ್ತಾಯವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ತ್ಯಾಮಗೊಂಡ್ಲು ಗ್ರಾಪಂ (21 ಸದಸ್ಯರು) ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಪಂ (32 ಸದಸ್ಯರು)ಗೆ ಹಿಂದಿನ ಸಾರ್ವತ್ರಿಕ ಚುನಾವಣೆ ಯಲ್ಲಿ ಯಾವುದೇ ನಾಮಪತ್ರ ಬಾರದೆ ಚುನಾವಣೆ ಬಾಕಿಯಿದೆ.

ಮೂರು ಗ್ರಾಪಂಗಳ ಒಟ್ಟು 67 ಸ್ಥಾನಗಳ ಜತೆಗೆ ರಾಜ್ಯದಲ್ಲಿ ವಿವಿಧ ಕಾರಣಗಳಿಗೆ ತೆರವಾ ಗಿರುವ ಒಟ್ಟಾರೆ 201 ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವ ಕಾರಣ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಮೇ 5 ರಿಂದ 22ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮತದಾನವು ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಮದ್ಯದ ಅಂಗಡಿಗಳು ಹಾಗೂ ತಯಾರಿಕಾ ಘಟಕಗಳನ್ನು ಮುಚ್ಚಬೇಕು ಎಂದು ಆಯೋಗ ಸೂಚಿಸಿದೆ.

ಗ್ರಾ.ಪಂ.ಗಳ ಚುನಾವಣೆ ಮತಪತ್ರದಲ್ಲಿ ‘ಮತಪತ್ರದ ಪಟ್ಟಿಯಲ್ಲಿರುವ ಯಾರೂ ನನ್ನ ಮತಕ್ಕೆ ಅರ್ಹರಲ್ಲ (ನೋಟಾ)’ ಎಂದು ನಮೂದಿಸುವ ಅವಕಾಶ ಇರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ನಾಮಪತ್ರ ಸಲ್ಲಿಕೆ ಆರಂಭ: 5-05-2022
ನಾಮಪತ್ರ ಸಲ್ಲಿಕೆಗೆ ಕೊನೆ ದಿನ: 10-05-2022
ನಾಮಪತ್ರಗಳ ಪರಿಶೀಲನೆ: 11-05-2022
ನಾಮಪತ್ರ ವಾಪಸ್​ಗೆ ಕೊನೆ ದಿನ: 13-05-2022
ಮತದಾನ (ಬೆಳಗ್ಗೆ 7 ರಿಂದ ಸಂಜೆ 55ರವರೆಗೆ): 20-05-2022
ಮತಗಳ ಎಣಿಕೆ (ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8ರಿಂದ): 22-05-2022