Sunday, 15th December 2024

ಡಿ.10ರೊಳಗೆ ರಾಜ್ಯದ 25 ಸಾವಿರ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ

ಬೆಂಗಳೂರು : ವಿದ್ಯುತ್ ಸಂಪರ್ಕ ಇಲ್ಲದ ಬಡ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ 10ರೊಳಗೆ ರಾಜ್ಯದ 25 ಸಾವಿರ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಇಲಾಖೆ ಆದೇಶಿಸಿದೆ.

ಇಂಧನ ಸಚಿವ ವಿ.ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಆದ್ಯತೆ, ಪ್ರಾಥಮಿಕ ವರದಿಯಲ್ಲಿ 23-25 ಸಾವಿರ ಬಡ ಕುಟುಂಬಗಳಿಗೆ ವಿದ್ಯುತ್ ಇಲ್ಲ ಎಂದು ತಿಳಿದುಬಂದಿದೆ. ವಿದ್ಯುತ್ ಸರಬರಾಜು ಕಾಮಗಾರಿಗೆ ಮೀಸಲಿರುವ ಮೊತ್ತವನ್ನು ಬಳಸಿ ಕೊಂಡು ಡಿಸೆಂಬರ್ 10ರೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಇಲಾಖೆ ಆದೇಶಿಸಿದೆ.

ಕೇಂದ್ರ ಸರ್ಕಾರದ ದೀನದಯಾಳ್ ಉಪಾಧ್ಯಾಯಗ್ರಾಮಜ್ಯೋತಿ ಯೋಜನೆ ಹಾಗೂ ಸೌಭಾಗ್ಯ ಯೋಜನೆಯಡಿಯಲ್ಲಿ ಒಟ್ಟು 4.29 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಈ ಯೋಜನೆ ಡಿಸೆಂಬರ್ 2020 ಕ್ಕೆ ಅಂತ್ಯಗೊಂಡಿದೆ. ಯೋಜನೆ ಮುಕ್ತಾಯಗೊಂಡ ಬಳಿಕ ವಿದ್ಯುತ್ ಸಂಪರ್ಕ ಪಡೆಯದೇ ಬಾಕಿ ಇರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ.