ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸಾವು ನೋವು ಸಂಭವಿಸುತ್ತಿದೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಗೆ ಹಾನಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಕರ್ನಾಟಕದ ದಸರಾ ಆನೆಗಳನ್ನು ಹೊರತು ಪಡಿಸಿ 4 ಕುಮ್ಕಿ ಆನೆಗಳನ್ನು (Kumki elephants) ಆಂಧ್ರಕ್ಕೆ ನೀಡಲಾಗವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.
ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಅರಣ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರದ ಅರಣ್ಯ ಇಲಾಖೆ ಸಿಬ್ಬಂದಿಗೆ ಮತ್ತು ಮಾವುತರಿಗೆ ಆನೆ ಸೆರೆ ಹಿಡಿಯುವ, ಪಳಗಿಸುವ ಮತ್ತು ಅದನ್ನು ಆನೆ ಕಾರ್ಯಾಚರಣೆಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ದಸರಾ ಆನೆ ಕೊಡುವುದಿಲ್ಲ
ರಾಜ್ಯದ ದಸರಾ ಮಹೋತ್ಸವದಲ್ಲಿ ಭಾಗಿಯಾಗುವ ಆನೆಗಳ ಬಗ್ಗೆ ಜನರಲ್ಲಿ ಭಾವನಾತ್ಮಕ ನಂಟಿರುತ್ತದೆ. ಹೀಗಾಗಿ ದಸರಾದಲ್ಲಿ ಭಾಗಿಯಾದ ಯಾವುದೇ ಆನೆಯನ್ನಾಗಲೀ, ಮುಂಬರುವ ದಸರಾ ಮಹೋತ್ಸವಕ್ಕಾಗಿ ಗುರುತಿಸಲಾದ ಯಾವುದೇ ಕುಮ್ಕಿ ಆನೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆಂಧ್ರ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ
ಆಂಧ್ರ ಪ್ರದೇಶದ ಕಾಡಂಚಿನಲ್ಲಿರುವ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಅಪಾರ ಬೆಳೆ ನಷ್ಟ, ಪ್ರಾಣ ಹಾನಿ ಉಂಟಾಗಿದೆ. ಹೀಗಾಗಿ ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕಲು ಕುಮ್ಕಿ ಆನೆಗಳನ್ನು ಕಳುಹಿಸಿಕೊಡುವಂತೆ ಕರ್ನಾಟಕಕ್ಕೆ ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿತ್ತು. ಶುಕ್ರವಾರ ಈ ಸಂಬಂಧ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅವರ ಸಮ್ಮುಖದಲ್ಲಿ 8 ಕುಮ್ಕಿ ಆನೆಗಳನ್ನು ನೀಡುವ ಕುರಿತು ಒಪ್ಪಂದ ನಡೆದಿದೆ. ಕುಮ್ಕಿ ಆನೆಗಳೆಂದರೆ ತರಬೇತಿ ಪಡೆದ ಆನೆಗಳಾಗಿದ್ದು, ಇವುಗಳನ್ನು ಕಾಡಾನೆಗಳ ಸೆರೆ ಕಾರ್ಯಾಚರಣೆಗೆ ಬಳಸಲಾಗುತ್ತದೆ.
ತುಮಕೂರಿನಲ್ಲಿ ಮೆಮು ರೈಲು ಲೋಕಾರ್ಪಣೆ
ತುಮಕೂರು: ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ (Railway Revolution) ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ (MInister V Somanna) ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು, ಯಶವಂತಪುರ ಹೊಸ ಮೆಮು ರೈಲು ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾನಿನ್ನು ಇಲಾಖೆಯ ಬಗ್ಗೆ ಬಹಳ ತಿಳಿದುಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಬಾಕಿ ಉಳಿದಿರುವ, ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಸಂಪೂರ್ಣಗೊಳಿಸುವ ಮೂಲಕ ರೈಲ್ವೆ ಕ್ರಾಂತಿ ಮಾಡುವುದಾಗಿ ಹೇಳಿದರು.
ರಾಯದುರ್ಗ ಯೋಜನೆ ಪೂರ್ಣ: 2027ರ ಮಾರ್ಚ್ ಒಳಗೆ ರಾಯದುರ್ಗ-ತುಮಕೂರು, ದಾವಣಗೆರೆ-ತುಮಕೂರು ರೈಲ್ವೆ ಮಾರ್ಗಗಳ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Railway Minister Ashwini Vaishnav) ರವರಿಂದ ಲೋಕಾರ್ಪಣೆ ಮಾಡಿಸಲಾಗುವುದು .
ಬೆಂಗಳೂರಿಗೆ ಸಬ್‌ಅರ್ಬನ್ ರೈಲು(SubUrban Train) ಸೇವೆ ಒದಗಿಸಲು ಈಗಾಗಲೇ ಸಚಿವರಾದ ಅಶ್ವಿನಿ ವೈಷ್ಣವ್‌ರವರೊಂದಿಗೆ ಚರ್ಚೆ ಮಾಡಿದ್ದು, 2025ರೊಳಗೆ 2 ಹಂತದ ಸಬ್‌ಅರ್ಬನ್ ರೈಲುಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಸ್ವಯಂ ಪ್ರೇರಿತ ಸಿಗ್ನಲ್ : ತುಮಕೂರು-ಅರಸೀಕೆರೆ ಮಾರ್ಗ(Tumkur-Arsikere Route) ದಲ್ಲಿ 220 ಕೋಟಿ ವೆಚ್ಚದಲ್ಲಿ ಸ್ವಯಂಪ್ರೇರಿತ ಸಿಗ್ನಲ್‌ಗಳನ್ನು ಸಹ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ .
ಈ ಸುದ್ದಿಯನ್ನೂ ಓದಿ | Devara Movie Review: ಜ್ಯೂ.ಎನ್‌ಟಿಆರ್ ಅಭಿಮಾನಿಗಳಿಗೆ ಹಬ್ಬ, ಜಾನ್ವಿ ಕಪೂರ್ ಫ್ಯಾನ್‌ಗಳಿಗೆ ನಿರಾಶೆ
ತುಮಕೂರನ್ನು ಮತ್ತೊಂದು ಬೆಂಗಳೂರನ್ನಾಗಿ ಮಾಡಬೇಕು ಎಂಬ ಆಸೆ ತಮಗಿದೆ. ಹಾಗಾಗಿ ತುಮಕೂರು-ಬೆಂಗಳೂರು ಮಾರ್ಗದಲ್ಲಿರುವ 2 ಪಥದ ರೈಲ್ವೆ ಹಳಿಗಳನ್ನು 4 ಲೈನ್‌ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳ ಲಾಗುವುದು ಎಂದರು.