Sunday, 19th May 2024

ಕೊರೊನಾಗೆ ಮಾಜಿ ಕಾರ್ಪೋರೇಟರ್ ಬಲಿ

ಎರಡು ಬಾರಿ ಕಾರ್ಪೋರೇಟರ್ ಆಗಿದ್ದ ಎಂ.ನಾಗರಾಜು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಎರಡು ಬಾರಿ ಕಾರ್ಪೋರೇಟರ್ ಆಗಿದ್ದ ಎಂ.ನಾಗರಾಜು ಅವರು ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ ಮೂರು ದಿನದ ಹಿಂದೆ ಕೊರೊನಾ ದೃಢಪಟ್ಟಿತ್ತು. ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ನಾಗರಾಜು ಹೃದಯಾ ಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಎಂ.ನಾಗರಾಜುಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು ಎಂದು ಮೂಲ ಗಳು ತಿಳಿಸಿವೆ.

ಮೃತರ ಪಾರ್ಥಿವ ಶರೀರವನ್ನು ಕುರುಬರಹಳ್ಳಿಯ ಸತ್ಯನಾರಾಯಣ ಲೇಔಟ್‍ನ ಅವರ ನಿವಾಸದಲ್ಲಿ ಮಧ್ಯಾಹ್ನದವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗಿತ್ತು. ತದನಂತರ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಗೆ ಮೃತರ ಪಾರ್ಥೀವ ಶರೀರವನ್ನು ಕೊಂಡೊಯ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಮೂರು ಬಾರಿ ಬಿಬಿಎಂಪಿ ಸದಸ್ಯರು, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಾಗಿ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದ ಎಂ.ನಾಗರಾಜ್, 2015ರ ಬಿಬಿಎಂಪಿ ಚುನಾವಣೆಯಲ್ಲಿ ನಂದಿನಿ ಲೇಔಟ್‍ನಿಂದ ಸ್ಪರ್ಧಿಸಿ ಪರಾಜಯಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರಿ ಪಕ್ಷದ ಕಾರ್ಯಕಾರಿಣಿ ಸದಸ್ಯರಾಗಿ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಬಿಜೆಪಿ ಪಕ್ಷ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೃತರ ಗೌರವಾರ್ಥ ಮಹಾಲಕ್ಷ್ಮಿ ಲೇಔಟ್‍ನ ಬಿಜೆಪಿಯ ಎಲ್ಲ ಕಾರ್ಯಕ್ರಮಗಳನ್ನು ರದ್ದುಮಾಡಲಾಗಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಗೋಪಾಲಯ್ಯ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್, ಕೇಶವಮೂರ್ತಿ, ಎಸ್.ಹರೀಶ್, ಮಾಜಿ ಮೇಯರ್‍ಗಳಾದ ರಾಮಚಂದ್ರಪ್ಪ, ಹುಚ್ಚಪ್ಪ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಎಚ್.ಎಂ.ರೇವಣ್ಣ, ಬಿಜೆಪಿ ಮುಖಂಡರಾದ ಆರ್.ವಿ.ಹರೀಶ್, ರಾಘವೇಂದ್ರಶೆಟ್ಟಿ, ರಾಜೇಂದ್ರ ಕುಮಾರ್, ಜಯರಾಜು, ಜಯಸಿಂಹ, ಶಿವಾನಂದ ಸೇರಿದಂತೆ ಕಾಂಗ್ರೆಸ್, ಅಭಿಮಾನಿಗಳು, ಸ್ನೇಹಿತರು, ಕಾರ್ಯ ಕರ್ತರು ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು ಪಕ್ಷಾತೀತವಾಗಿ ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!