Friday, 22nd November 2024

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದಾರೆ.

ಮಂಗಳವಾರ ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಯಲ್ಲಿ ಮಾತನಾಡಿರುವ ಅವರು ಲಾಕ್‌ಡೌನ್‌ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಅಗತ್ಯವಾಗಿದ್ದು, ನೈಟ್‌ ನೈಟ್ ಕರ್ಫ್ಯೂ ಜಾರಿ ಮಾಡಿರುವುದರಿಂದ ಯಾವುದೇ ಪ್ರಯೋಜನವಾಗುವು ದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಯಾವುದೇ ಮುಲಾಜಿಲ್ಲದೆ ಲಾಕ್‌ಡೌನ್ ಮಾಡಿ. ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿರುವ ಜಾಗಗಳಲ್ಲಿ ತಕ್ಷಣ ಲಾಕ್ ಡೌನ್ ಮಾಡಬೇಕು. ನೈಟ್ ಕರ್ಫ್ಯೂ ನಿಂದ ಪ್ರಯೋಜನ ಇಲ್ಲ ಎಂದು ಮಾಜಿ ಸಿಎಂ ಸರ್ವ ಪಕ್ಷ ಸಭೆಯಲ್ಲಿ ಆಗ್ರಹಿಸಿದ್ದಾರೆ.

15 ದಿನಗಳ ಕಾಲ ಲಾಕ್ ಡೌನ್ ಮಾಡಿದರೂ ಬಡವರಿಗೆ ಒಂದು ತಿಂಗಳ ಆರ್ಥಿಕ ಸಹಾಯ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಡಿಕೆ ಶಿವಕುಮಾರ್ , ಸರ್ಕಾರಕ್ಕೆ ನಾವು ಸಹಕಾರ ಕೊಡಲು ಸಿದ್ಧ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಕಡೆ ಕಡಿಮೆ ಗಮನ ಕೊಡಿ. ಜನರ ಆರೋಗ್ಯಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಮತ್ತು ಬೆಂಗಳೂರು ಲಾಕ್ ಡೌನ್ ಸಂಬಂಧಿಸಿದಂತೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.