Thursday, 12th December 2024

ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಮಂಗಳೂರು: ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.

ಈ ವರೆಗೆ ಯಾವ ಗಾಯದ ವರದಿಯಾಗಿಲ್ಲ ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ತಲುಪಿದ ವೇಳೆ ಬೆಂಕಿಯನ್ನು ಗಮನಿಸಿದ ರೈಲಿನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದು ರೈಲು ನಿಲ್ಲಿಸಿದ್ದಾರೆ. ಇದರಿಂದಾಗಿ ದೊಡ್ಡ ದುರಂತ ತಪ್ಪಿದಂತಾಗಿದೆ.

ಬೆಂಕಿಯನ್ನು ನಂದಿಸಲು ಸ್ಥಳೀಯರು, ರೈಲು ಪ್ರಯಾಣಿಕರುಮತ್ತು ಅಗ್ನಿಶಾಮಕ ಸಿಬ್ಬಂದಿ ಒಟ್ಟಾಗಿ ಕಾರ್ಯಾಚರಣೆ ನಡೆಸಿದ್ದಾರೆ. ರೈಲಿನಲ್ಲಿರುವ ಎಲ್ಲಾ ಪ್ರಯಾಣಿಕರು ಸುರಕ್ಷಿತ ವಾಗಿದ್ದಾರೆ ಎಂದು ವರದಿಯಾಗಿದೆ.