Saturday, 14th December 2024

ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ: ಸವದಿ ನೇತೃತ್ವದಲ್ಲಿ ಸಭೆ

ಸಾರಿಗೆ ಸಂಸ್ಥೆಗಳ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಡುವೆ ಸೂಕ್ತ ಕಾರ್ಯ ಸಂಯೋಜನೆಗಳೊಂದಿಗೆ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವ ಕುರಿತು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಶ್ರೀ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾದ ಶ್ರೀಮತಿ ಶ್ರುತಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್, ಪ್ರವಾಸೋ ದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ, ಬಿಎಂಟಿಸಿ ಎಂ.ಡಿ. ಶ್ರೀಮತಿ ಶಿಖಾ ಸಾರಿಗೆ ಆಯುಕ್ತರಾದ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.