ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ಮೈಸೂರಿನ (Muysuru news) ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ ಪ್ರಕರಣಗಳಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಲಾಗುತ್ತದೆ. ಆದರೆ ಖರೀದಿದಾರರೇ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ನಿರಾಧಾರವಾಗಿದೆ. ಹೀಗಾಗಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೂರು ನೀಡಿದ್ದಾರೆ.
ಎನ್.ಸಿ.ಆರ್. ದೂರು ದಾಖಲಿಸಿದ್ದ ಪೊಲೀಸರು ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದು, ಬುಧವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿಗೆ ಕೊನೇ ದಿನಾಂಕ ಇಲ್ಲಿದೆ
ಬೆಂಗಳೂರು: 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -1ಕ್ಕೆ ರಾಜ್ಯದ ಎಲ್ಲ ಶಾಲೆಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅವಧಿಯನ್ನು ನ.20ರವರೆಗೆ ಮತ್ತು ಶುಲ್ಕ ಪಾವತಿಸಲು ನ.30ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ, ಖಾಸಗಿ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು ನ.11 ಕೊನೆಯ ದಿನವಾಗಿತ್ತು.
ಆದರೆ, ಕೆಲವು ಶಾಲೆಗಳಿಂದ ಮತ್ತು ಪಾಲಕರಿಂದ ದೂರವಾಣಿ ಮೂಲಕ ವಿದ್ಯಾ ರ್ಥಿಗಳ ನೋಂದಣಿ ದಿನಾಂಕವನ್ನು ಮತ್ತೆ ವಿಸ್ತರಿಸಲು ಕೋರಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ನ.20ರವರೆಗೆ ವಿಸ್ತರಿಸಲಾಗಿದೆ. ಚಲನ್ ಮುದ್ರಿಸಿಕೊಳ್ಳಲು ನ.26 ಮತ್ತು ಚಲನ್ ಅನ್ನು ಬ್ಯಾಂಕ್‌ಗೆ ಜಮೆ ಮಾಡಲು ನ.30 ಕೊನೆಯ ದಿನವಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಇದನ್ನೂ ಓದಿ: CM Siddaramaiah: ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲು ಪ್ರಸ್ತಾವ ಇಲ್ಲ: ಸಿಎಂ ಸಿದ್ದರಾಮಯ್ಯ