ಬೆಂಗಳೂರು: ಬೆಂಗಳೂರಿನಲ್ಲಿ (Bengaluru News) ಹೊಸ ವರ್ಷದ ಮೊದಲ ದಿನ ರಾತ್ರಿ ಅಗ್ನಿ ಅವಘಡ (Fire Tragedy) ಸಂಭವಿಸಿದೆ. ಐಷಾರಾಮಿ ಬೈಕ್ ಶೋರೂಂಗೆ (Bike Showroom) ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಕ್ಕಳಿಬ್ಬರ ದುರ್ಮರಣ
ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು (Drowned) ಸಾವನ್ನಪ್ಪಿರುವಂತಹ ಘಟನೆ ವಿಜಯಪುರ (vijayapura news) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ.
ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ಗೀತಾ ತನ್ನ ತಂದೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: Child Death: ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಬಾಲಕಿ ಸಾವು