ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಇಂದು ಮತ್ತೊಂದು ಅಗ್ನಿ ದುರಂತ(Fire Tragedy) ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಗಾರ್ಮೆಂಟ್ ಗೋದಾಮು ಸುಟ್ಟು ಕರಕರಾಗಿದೆ. ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಭೀಕರ ದುರ್ಘಟನೆ ನಡೆದಿದ್ದು, ಗೋದಾಮಿನಲ್ಲಿರುವಂತಹ ಬಟ್ಟೆ ವೆದರ್ ಸೇರಿದಂತೆ ಹಲೋ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಬಟ್ಟೆ, ಲೆದರ್ ಸೇರಿ ಕೆಮಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಇನ್ನು ಇದುವರೆಗೆ ಯವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ನಿನ್ನೆ ಬೈಕ್ ಶೋ ರೂಂ ಗೂ ಬೆಂಕಿ!
ಬೆಂಗಳೂರಿನಲ್ಲಿ ಹೊಸ ವರ್ಷದ ಮೊದಲ ದಿನ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಐಷಾರಾಮಿ ಬೈಕ್ ಶೋರೂಂಗೆ (Bike Showroom) ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿತ್ತು.
ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಇಡೀ ಶೋರೂಂಗೆ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು ಸುಟ್ಟು ಕರಕಲಾಗಿವೆ. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ: Fire Tragedy: ಬೆಂಗಳೂರಿನ ಬೈಕ್ ಶೋರೂಂಗೆ ಬೆಂಕಿ, ಲಕ್ಷಾಂತರ ಮೌಲ್ಯದ ಬೈಕ್‌ಗಳು ಕರಕಲು