Thursday, 21st November 2024

HSRP Number Plate: ಈ ದಿನದೊಳಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಭಾರಿ ದಂಡ ಖಚಿತ!

hsrp deadline

ಬೆಂಗಳೂರು: 2019ರ ಏಪ್ರಿಲ್ 1ರ ಹಿಂದೆ ರಾಜ್ಯದಲ್ಲಿ ನೋಂದಣಿ ಆಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಸಿ ನಂಬರ್‌ ಪ್ಲೇಟ್‌ (HSRP Number Plate) ಅಳವಡಿಕೆ ಮಾಡುವುದು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ (Transport department) 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಇದನ್ನು ಅಳವಡಿಸಲು ನೀಡಲಾಗಿರುವ ಗಡುವಿಗೆ ಇನ್ನು ಕೇವಲ ಹತ್ತು ದಿನಗಳಿವೆ.

ಸಾರಿಗೆ ಇಲಾಖೆ ಗಡುವು ವಿಸ್ತರಿಸುತ್ತಾ ಬಂದಿದ್ದು, ಸೆಪ್ಟೆಂಬರ್‌ 15 ತಾರೀಕನ್ನು ಗಡುವಾಗಿ ನಿಗದಿಪಡಿಸಿದೆ. ವಾಹನ ಸವಾರರು ಈ ಮಾಹಿತಿಯನ್ನು ಇಲ್ಲಿ ಗಮನಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಬಹು ಮಂದಿ ಸಾರಿಗೆ ಇಲಾಖೆ ಸೂಚಿಸಿದಂತೆ ಎಚ್​ಎಸ್​ಆರ್‌ಪಿ ನಂಬರ್‌ ಪ್ಲೇಟ್‌ಗಳ ಅಳವಡಿಕೆ ಮಾಡಿದ್ದು, ಕೆಲವರು ಗಡುವು ನೀಡುತ್ತಾ ಬಂದಿದ್ದರೂ ಕೂಡ ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ಸಾರಿಗೆ ಇಲಾಖೆ ಭಾರಿ ದಂಡ ವಿಧಿಸುವ ನಿರ್ಧಾರಕ್ಕೆ ಬಂದಿದೆ.

ಸೆಪ್ಟೆಂಬರ್ 15ರವರೆಗೆ ಎಚ್​ಎಸ್​ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನು ಮೀರಿ HSRPಗಳನ್ನು ಅಳವಡಿಕೆ ಮಾಡದ ವಾಹನ ಮಾಲೀಕರು ಸೆಪ್ಟೆಂಬರ್‌ 16ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುಂಚಿತವಾಗಿ ನೋಂದಣಿ ಆಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿಯನ್ನು ಸಾರಿಗೆ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ.

ಇನ್ನು ಸಾರಿಗೆ ಇಲಾಖೆ ಪೊಲೀಸ್ ಇಲಾಖೆ ಜೊತೆ ಸೇರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಹಾಕಲು ನಿರ್ಧರಿಸಿದೆ. ಅವಧಿಯೊಳಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದಿದ್ದರೆ, 500-1,000 ರೂಪಾಯಿ ವರೆಗೆ ದಂಡ ವಿಧಿಸಲಿದೆ ಎಂದು ಎನ್ನುವ ಮಾಹಿತಿ ಲಭ್ಯವಾಗಿದೆ.

HSRP ಅಳವಡಿಕೆಗೆ ಸುಲಭ ವಿಧಾನಗಳು

* ಎಚ್‌ಎಸ್‌ಆರ್‌ಪಿ ಎಂದು ಟೈಪ್‌ ಮಾಡಿ ಅದರ ಮೇಲೆ ಕ್ಲಿಕ್ ಮಾಡಿ

* ಬಳಿಕ ವಾಹನದ ವಿವರಗಳನ್ನು ಭರ್ತಿ ಮಾಡಿ.

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿದರೆ, ಅವರೇ ಬ೦ದು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಫಿಟ್ ಮಾಡಲಿದ್ದಾರೆ.

ಈ ಸುದ್ದಿ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ವಿಸ್ತರಣೆ