Tuesday, 30th May 2023

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಇದೇ ತಿಂಗಳ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.

ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಕೆಎಸ್‌ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಜು.19ರಂದು ಕೋರ್ ಸಬ್ಜೆಕ್ಟ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜು.22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.

error: Content is protected !!