ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ.
ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ.
ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2015 ರಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ ಮಹದಾಯಿ ಹೋರಾಟಗಾರರು ಒಂದು ವರ್ಷ ಕಾಲ ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.
ಈ ಬಾರಿ ಮಂಡನೆಯಾಗುತ್ತಿರುವ ಬಜೆಟ್ ನಲ್ಲಿ ಕಳಸಾ ಕಾಮಗಾರಿಗೆ ಅನುದಾನ ಸಿಗಬಹುದೆನ್ನುವ ನಿರೀಕ್ಷೆ ರೈತರಲ್ಲಿತ್ತು. ಅದು ಈಗ ಈಡೇರಿದ್ದು ಸಿಎಂ ಯಡಿಯೂರಪ್ಪನವರು 1,677 ಕೋಟಿ ರೂ. ಅನುದಾನ ನೀಡಿದ್ದಾರೆ.