Tuesday, 19th November 2024

G Parameshwara: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಪರಮೇಶ್ವರ್‌

G Parameshwara

ತುಮಕೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿ ವಿಚಾರಗಳನ್ನು ಬದಿಗೊತ್ತಿ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅನುಷ್ಠಾನ ಮಾಡಿಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ’ ಎಂಬ ರೀತಿಯಲ್ಲಿ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ. ಹಾಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ ಎಂದರು.

ಮಹಾರಾಷ್ಟ್ರದ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಮತ್ತೊಮ್ಮೆ ಜಾಹೀರಾತು ಪರಿಶೀಲಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Indira Gandhi Birth Anniversary: ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲು ನಮ್ಮ ತಕರಾರಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಒಂದೇ ದಿನದಲ್ಲಿ ಉದ್ಯೋಗ ನೀಡಿ ಅನುಕಂಪ ತೋರಿದ ಜಿಲ್ಲಾಧಿಕಾರಿ

Tumkur News

ತುಮಕೂರು: ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದ ಘಟನೆ (Tumkur News) ಮಂಗಳವಾರ ನಡೆದಿದೆ.

ತುರುವೇಕೆರೆ ತಾಲೂಕು ಡಿ ಕಲ್ಕೆರೆಯ ಪರಮೇಶ್ವರ್ ಅವರು ಅಗ್ನಿಶಾಮಕ ವಾಹನದ ಚಾಲಕರಾಗಿ ಉದ್ಯೋಗದಲ್ಲಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಇಂದು ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಮೃತ ಪರಮೇಶ್ವರ್ ಅವರ ಪತ್ನಿ ರೋಹಿಣಿ ಅವರನ್ನು ಕಚೇರಿಗೆ ಕರೆದು ಮಾತನಾಡಿಸಿದರು.

ಮೂರು ವರ್ಷದ ತಮ್ಮ ಮಗು ಹಾಗೂ ಅತ್ತೆಯೊಂದಿಗೆ ಬಂದಿದ್ದ ರೋಹಿಣಿಯವರನ್ನು ತಮ್ಮ ಕಚೇರಿಯಲ್ಲೇ ಕೂರಿಸಿಕೊಂಡು ಕೇವಲ ಅರ್ಧ ತಾಸಿನಲ್ಲಿ ಅನುಕಂಪದ ಉದ್ಯೋಗದ ನೇಮಕಾತಿ ಆದೇವನ್ನು ಸಂತ್ರಸ್ಥ ಮಹಿಳೆಗೆ ನೀಡಿದರು.

ಕುಣಿಗಲ್ ತಾಲೂಕಿನಲ್ಲಿ ಡಿ ವರ್ಗದ ನೌಕರರಾಗಿ ನೇಮಕಾತಿಗೆ ಆದೇಶಿಸಿ ರೋಹಿಣಿಯವರಿಗೆ ಆದೇಶ ಪತ್ರ ನೀಡಿದರು. ನೇಮಕಾತಿ ಆದೇ ಸಿದ್ಧವಾಗುವವರೆಗೆ ಅರ್ಧ ತಾಸು ತಮ್ಮಕಚೇರಿಯಲ್ಲಿ ಪಕ್ಕದಲ್ಲೇ ಕುರ್ಚಿಯಲ್ಲಿ ಕೂರಿಸಿಕೊಂಡ ಜಿಲ್ಲಾಧಿಕಾರಿಗಳು ಮಗುವಿಗೆ ಬಿಸ್ಕತ್ತು, ಚಾಕ್ಲೆಟ್ ನೀರು ತರಿಸಿ ಕೊಟ್ಟಿದ್ದು ಅವರ ಅಂತಃಕರಣದ ಭಾವವನ್ನು ತೋರಿತು.

ಈ ಸುದ್ದಿಯನ್ನೂ ಓದಿ | Mysuru News: ಮೈಸೂರಿನಲ್ಲಿ ನ.21ರಿಂದ ಡಿ.7ರವರೆಗೆ ಉಚಿತ ಮೊಣಕಾಲು ಮರುಜೋಡಣೆ ಶಸ್ತ್ರಚಿಕಿತ್ಸೆ ಪರೀಕ್ಷೆ