Thursday, 12th December 2024

ಶಾಸಕ ಜಿ.ಕರುಣಾಕರರೆಡ್ಡಿಗೆ ಸಚಿವ ಸ್ಥಾನ ನೀಡಿ‌ : ಚನ್ನಬಸವ ಶಿವಯೋಗಿ ಶ್ರೀ ಒತ್ತಾಯ

ಹರಪನಹಳ್ಳಿ: ಕ್ಷೇತ್ರದ ಶಾಸಕ ಜಿ.ಕರುಣಾಕರರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ಜಂಗಮ ಸಂಸ್ಥಾನ ಪೀಠದ ಚನ್ನಬಸವ ಶಿವಯೋಗಿ ಶ್ರೀಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಶ್ರೀಗಳು ನಂಜುಂಡಪ್ಪ ವರದಿಯಲ್ಲಿ ಹೇಳಿರುವಂತೆ ಹರಪನಹಳ್ಳಿ ತಾಲೂಕು ಅತೀ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೊತ್ತಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಮಾ ಜಿಕವಾಗಿ ಸೇರಿದಂತೆ ಈ ಕ್ಷೇತ್ರ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಬೇಕಾದರೆ ಶಾಸಕ ಜಿ.ಕರುಣಾಕರ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದರು.

ಕರುಣಾಕರರೆಡ್ಡಿ ಅವರು ಸಂಸದರಾಗಿ, ಹಿಂದೆ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಕಂದಾಯ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಅನುಭವ ಉಳ್ಳವರು ಜೊತೆಗೆ ವಿಜಯ ನಗರ ಹಾಗೂ ಬಳ್ಳಾರಿ ಜಿಲ್ಲೆಯ ಬಿಜೆಪಿಯ ಹಿರಿಯ ರಾಜಕಾರಣಿಯಾಗಿದ್ದಾರೆ.

ಹಾಗಾಗಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಹರಪನಹಳ್ಳಿಯ ಶಾಸಕ ಜಿ.ಕರುಣಾಕರರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಜೊತೆಗೆ ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂದು ನೀಲಗುಂದ ಗ್ರಾಮದ ಗುಡ್ಡದ ಜಂಗಮ ಸಂಸ್ಥಾನ ಪೀಠದ ಚನ್ನಬಸವ ಶಿವಯೋಗಿ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.