Monday, 16th December 2024

Gold Price Today: ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಸತತ ಎರಡನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Price Today

ಬೆಂಗಳೂರು: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ (ಡಿ.16) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,120 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,400 ರೂ. ಮತ್ತು 100 ಗ್ರಾಂಗೆ 7,14,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,312 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,890 ರೂ. ಮತ್ತು 100 ಗ್ರಾಂಗೆ 7,78,900 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
 ಬೆಂಗಳೂರು7,140 ರೂ.7,789 ರೂ.
 ದಿಲ್ಲಿ7,155 ರೂ.7,804 ರೂ.
 ಮುಂಬೈ7,140 ರೂ.7,789 ರೂ.
 ಚೆನ್ನೈ7,140 ರೂ.7,789 ರೂ.
 ಹೈದರಾಬಾದ್7,140 ರೂ.7,789 ರೂ.

ಬೆಳ್ಳಿ ಬೆಲೆ

ಇತ್ತ ಬೆಳ್ಳಿ ಬೆಲೆಯೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿ 1 ಗ್ರಾಂನ ಬೆಲೆ 92.50 ರೂ., 8 ಗ್ರಾಂಗೆ 740 ರೂ., 10 ಗ್ರಾಂಗೆ 925 ರೂ. ಮತ್ತು 1 ಕೆಜಿಗೆ 92,500 ರೂ. ಪಾವತಿಸಬೇಕಾಗುತ್ತದೆ.

ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ

ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್‌ (BIS) ಹಾಲ್‌ಮಾರ್ಕ್‌ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.

ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.

ಹೋಲಿಕೆ ಮಾಡಿ: ಮತ್ತೊಂದು ಮುಖ್ಯ ವಿಚಾರ ಎಂದರೆ ಬೆಲೆಗಳ ಹೋಲಿಕೆ. ಬೇರೆ ಬೇರೆ ಜ್ಯುವೆಲ್ಲರಿಗಳಲ್ಲಿ ವ್ಯತ್ಯಸ್ತ ಬೆಲೆಗಳಿರುತ್ತವೆ. ನೀವು ಚಿನ್ನ ಖರೀದಿಸುವ ಮುನ್ನ ಬೆಲೆಗಳನ್ನು ಹೋಲಿಸಿ ನೋಡಿ. ಇದರಿಂದ ನಿಮಗೆ ಸಾಕಷ್ಟು ಹಣ ಉಳಿತಾಯು ಮಾಡಬಹುದಾಗಿದೆ.

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ (Making Charges) ಮತ್ತು ವೇಸ್ಟೇಜ್ ಚಾರ್ಜ್ (Wastage Charges) ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.

ವಿನ್ಯಾಸ: ಮೊದಲೇ ಹೇಳಿದಂತೆ ಆಭರಣಗಳ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಸೂಕ್ಷ್ಮ ಕೆತ್ತನೆಯ, ಕೈಯಿಂದ ತಯಾರಿಸುವ ಆಭರಣ ಸ್ವಲ್ಪ ದುಬಾರಿಯಾಗಿತ್ತವೆ. ಆದ್ದರಿಂದ ಈ ಬಗ್ಗೆಯೂ ಗಮನ ಹರಿಸಿ.

ಈ ಸುದ್ದಿಯನ್ನೂ ಓದಿ: Indian Bank: ವಾಣಿಜ್ಯ ವಾಹನಗಳಿಗೆ ಹಣಕಾಸು ಉತ್ಪನ್ನಗಳನ್ನು ನೀಡಲು ಟಾಟಾ ಮೋಟಾರ್ಸ್‌ ಜೊತೆಗೆ ಎಂಒಯುಗೆ ಸಹಿ ಹಾಕಿದ ಇಂಡಿಯನ್ ಬ್ಯಾಂಕ್