Sunday, 15th December 2024

Good News: SSLC ಮತ್ತು PUC ವಿದ್ಯಾರ್ಥಿಗಳೇ, ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ

good news incentive

ಬೆಂಗಳೂರು: ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ SSLC ಹಾಗೂ PUC ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ (Incentive) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ (1ರಿಂದ 10ನೇ ತರಗತಿ) ವೇತನಕ್ಕೂ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳ ಸಮೇತ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಸಮಾಜ ಕಲ್ಯಾಣ ಇಲಾಖೆಯು ಕಳೆದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಶೇ.75 ರವರೆಗೆ ಅಂಕ ಗಳಿಸಿದವರು ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಹರು. ಅವರಿಗೆ ಇಲಾಖೆಯಿಂದ ರೂ. 7000 ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ರೂ. 15000 ಪ್ರೋತ್ಸಾಹಧನ ನೀಡಲಾಗುವುದು.

ವಿದ್ಯಾರ್ಥಿಗಳು ಕೂಡಲೇ ಅಧಿಕೃತ ವೆಬ್‌ಸೈಟ್ sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಗೋಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ 08304-290464 ಸಂಪರ್ಕಿಸುವಂತೆ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

2nd PUC ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ದ್ವಿತೀಯ ಪಿ.ಯು.ಸಿ ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ 2nd PUC ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ sw.kar.nic.in ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಆನ್ ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಗೋಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ 08304-290464 ಸಂಪರ್ಕಿಸುವಂತೆ ಇಲಾಖೆ ತಿಳಿಸಿದೆ.

ಪೋಸ್ಟ್ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ಪ್ರವೇಶ ಆರಂಭ

ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಒಂದು ವರ್ಷ ಅವಧಿಯ ಪೋಸ್ಟ್ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ವೃತ್ತಿ ತರಬೇತಿಯ ಪ್ರವೇಶಾತಿ ಆರಂಭವಾಗಿದೆ. ಆದ್ದರಿಂದ ಕೇಂದ್ರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ.

ಜಿಟಿಟಿಸಿ ಮೆಕ್ಯಾನಿಕಲ್, ಅಟೊಮೊಬೈಲ್, ಎಲೆಕ್ಟ್ರಿಕಲ್, ಮೆಕೆಟ್ರಾನಿಕ್ಸ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯಗಳಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್(ಬಿ.ಇ) ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿ ಪಡೆಯಲು ಅರ್ಹರು ಎಂದು ಕೇಂದ್ರ ತಿಳಿಸಿದೆ.

ಒಂದು ವರ್ಷ ಅವಧಿಯ ಈ ಕೋರ್ಸ್‌ನಲ್ಲಿ ಎಲೆಕ್ಟ್ರಿಕಲ್ ಇನ್‌ಸ್ಟಾಲೇಶನ್, ಎಲೆಕ್ಟ್ರಿಕಲ್ ಪ್ಯಾನೆಲ್‌ಡಿಸೈನ್, ಮೆಕ್ಯಾನಿಕಲ್ ಆಂಡ್ ಸಿಸ್ಟೆಮ್ ಡಿಸೈನ್, ಪಿಎಲ್‌ಸಿ, ಸ್ಕಾಡಾ, ಅಟೊಮೇಶನ್, ಸಿಎನ್‌ಸಿ ಮೈಂಟೇನನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್ (ಐಓಟಿ), ರೋಬೋಟಿಕ್ಸ್ ಮತ್ತು ಪ್ರೊಜೆಕ್ಟ್ ಡೆವಲಪ್‌ಮೆಂಟ್ ವಿಷಯಗಳಲ್ಲಿ ಪರಿಣಿತಿ ಹೊಂದುವಷ್ಟು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ತರಬೇತಿಯ ಕೊನೆಯಲ್ಲಿ ಕ್ಯಾಂಪಸ್ ಸಂದರ್ಶನಗಳ ಮೂಲಕ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲಾಗುವುದು.

ತರಬೇತಿಯು ಸೆಪ್ಟೆಂಬರ್ 15ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗಾಗಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಟಿಟಿಸಿ, ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ ಕಚೇರಿ ಭೇಟಿ ನೀಡಿ. ಇಲ್ಲವೇ ದೂರವಾಣಿ ಸಂಖ್ಯೆ 8183860552, 0836-2333159, 155267 ಸಂಪರ್ಕಿಸುವಂತೆ ಜಿಟಿಟಿಸಿ ಮನವಿ ಮಾಡಿದೆ.