Sunday, 15th December 2024

Government Job News: ವಯೋಮಿತಿ ಮೀರಿದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಎಲ್ಲ ವರ್ಗಕ್ಕೂ 3 ವರ್ಷ ಸಡಿಲಿಕೆ

job news

ಬೆಂಗಳೂರು: ರಾಜ್ಯದ ಎಲ್ಲ ಸಿವಿಲ್ ಸೇವೆಗಳಲ್ಲಿನ (Karnataka Government Civil Services) ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ (Government Job News) ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ (Age Relaxation) ನೀಡಲು ಆದೇಶಿಸಲಾಗಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು. ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿದ್ದರು.

ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಸ್ವೀಕರಿಸಲಾಗಿರುವ ಮನವಿಗಳನ್ನು ಪರಿಶೀಲಿಸಿದ್ದು, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ ಆದೇಶಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (One time Measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಹಲವು ವರ್ಷಗಳಿಂದ ಸರ್ಕಾರಿ ನೌಕರಿ ಪಡೆಯಲು ಕಾದು ಕುಳಿತಿದ್ದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿಯನ್ನು ನೀಡಲಾಗಿದೆ. ರಾಜ್ಯದ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳ ಬೇಡಿಕೆಯನ್ನು ಮನ್ನಿಸಿ ರಾಜ್ಯು ಸಚಿವ ಸಂಪುಟದಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯ ಮೇಲೆ 3 ಸಡಿಲಿಕೆಗೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಈ ಸುದ್ದಿ ಓದಿ: Job News: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, 50,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ