ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ (CS Shadakshari) ಅವರು, ಸಂಘದ ಬೈಲಾ ನಿಯಮಗಳಲ್ಲಿ ಪ್ರದತ್ತವಾದ ಅಧಿಕಾರದಂತೆ ರಾಜ್ಯ ಸಂಘಕ್ಕೆ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಗಿರಿಗೌಡ, ಪ್ರಾಥಮಿಕ ಶಿಕ್ಷಣ ಇಲಾಖೆ, ಬೆಂಗಳೂರು., ಗೌರವಾಧ್ಯಕ್ಷರಾಗಿ ಎಸ್.ಬಸವರಾಜು, ವಾಣಿಜ್ಯ ತೆರಿಗೆ ಇಲಾಖೆ, ಬೆಂಗಳೂರು., ಕಾರ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಆರೋಗ್ಯ ಇಲಾಖೆ, ಬಾಗಲಕೋಟೆ ಅವರನ್ನು ನೇಮಕ ಮಾಡಲಾಗಿದೆ.
ಬಹುಸಂಖ್ಯಾತ ನೌಕರರನ್ನು ಹೊಂದಿರುವ ಇಲಾಖೆಗಳಿಗೆ ಆದ್ಯತೆ ನೀಡುವ ಸಲುವಾಗಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳು, ಬೈಲಾನಿಯಮದನ್ವಯ ಸಂಘದ ಶ್ರೇಯೋಭಿವೃದ್ಧಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನೀಡಿರುವ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | KSRTC news: ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ರಾಷ್ಟ್ರೀಯ ಪ್ರಶಸ್ತಿ!
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಅಭಿನಂದಿಸಿದ್ದಾರೆ.