ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ
ಪಾವಗಡ: ಗರ್ಭಿಣಿ ಹೆಣ್ಷು ಮಕ್ಕಳಿಗೆ ಸಿಗಬೇಕಾದ ಸವಲತ್ತುಗಳನ್ನು ನೇರವಾಗಿ ಸಿಗುವಂತಹ ಕೆಲಸ ಅಧಿಕಾರಿಗಳು ಮಾಡಬೇಕು. ಯಾವುದೇ ಲೋಪಗಳು ಕಂಡು ಬಂದಲ್ಲಿ ಅಧಿಕಾರಿಗಳೆ ನೇರ ಹೊಣೆ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳ ಲಾಗಿದ್ದ ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಪುನಶ್ಚೇತನ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಂತರ ಶ್ರೀಧರ್ ಜಿಲ್ಲಾ ನಿರೂಪಣಾಧಿಕಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಾತನಾಡಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ತಾರತಮ್ಯ ಭಾವನೆಯಿಂದ ಮೂಲ ಫಲಾನು ಭವಿಗಳಿಗೆ ಸಿಗಬೇಕಾದ ಸರ್ಕಾರದ ಸವಲತ್ತುಗಳು ಸಿಗುತ್ತಿಲ್ಲ. ಕರೋನ ಸಂಕಷ್ಟದಿಂದ ಜನರು ತತ್ತರಿಸಿ ಹೋಗಿದ್ದಾರೆ.
ಸರ್ಕಾರದಿಂದ ನೀಡುತ್ತಿರುವ ಭಾಗ್ಯ ಲಕ್ಮೀ ಬಾಂಡ್ ಹಣವು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗಿಸುವ ಮೂಲಕ ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ನೀಡುವಂತೆ ಸೂಚಿಸಿದರು. ನಂತರ ತಾಲ್ಲೂಕಿನ ಬಹುತೇಕ ಅರ್ಹ ಪಲಾನುಭವಿಗಳಿಗೆ ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮಾಡಿದರು.
ಇದೇ ವೇಳೆ, ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತರು ಶ್ರೀಧರ್ ರವರಿಗೆ ಈ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕಿಯಾರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಕೆಲ ವಿಚಾರಗಳಲ್ಲಿ ತಾರತಮ್ಯ ಮಾಡುತ್ತಿ ದ್ದಾರೆ. ಅವರು ಮಾಡಬೇಕಾದ ಕೆಲಸಗಳು ಅಂಗನವಾಡಿ ಕಾರ್ಯಕರ್ತೆಯರಿಂದ ಮಾಡಿಸುತ್ತಿದ್ದರೆ ಎಂದು ಅಧಿಕಾರಿಗಳಿಗೆ ದೂರು ಸಲ್ಲಿಸಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ರಾಮಾಂಜಿನಪ್ಪ. ಸದಸ್ಯ ಕಿರಣ್ ಕುಮಾರ್. ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಅಧಿಕಾರಿ ನಾರಾಯಣ್. ಗುಮಾಸ್ತ ರಾಕಿಬ್.ಮೇಲ್ವಿಚಾರಕಿಯರಾದ ಮಣಿ.ವಿಜಯಲಕ್ಷ್ಮಿ. ಜಯಲಕ್ಷ್ಮಿ. ಮಮತ.ಸುಧಾ. ಹಾಗೂ ತಾಲ್ಲೂಕಿನ ವಿವಿಧ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.