Sunday, 15th December 2024

ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಕೊಲ್ಹಾರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ತಹಶಿಲ್ದಾರ ಪಿ.ಜಿ ಪವಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜರುಗಿತು.

ತಾಲ್ಲೂಕ ವ್ಯಾಪ್ತಿಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು ಈ ಸಂದರ್ಭ ದಲ್ಲಿ ಸಾರ್ವಜನಿಕರಿಂದ ಅಹವಾಲು ಹಾಗೂ ಅರ್ಜಿಗಳನ್ನು ಸ್ವೀಕರಿಸಲಾಯಿತು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಯ ಒಟ್ಟು ೫೫ ಅರ್ಜಿಗಳನ್ನು ಸಾರ್ವಜನಿಕರಿಂದ ಈ ಸಂದರ್ಭದಲ್ಲಿ ಸ್ವೀಕರಿಸಲಾಗಿ ೨೦ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು, ಬಾಕಿ ಉಳಿದ ೩೫ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ ಮಾಡಲಾಗುವುದು ಎಂದು ತಹಶಿಲ್ದಾರ ಪಿ.ಜಿ ಪವಾರ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕ ವ್ಯಾಪ್ತಿಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.