Monday, 25th November 2024

Ground Gate Collapse: ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು

Ground Gate Collapse

ಬೆಂಗಳೂರು: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್‌ ಬಿದ್ದು (Ground Gate Collapse) ಮೃತಪಟ್ಟಿದ್ದ ಬಾಲಕ ನಿರಂಜನ್‌ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕಾರ್ಯಪಾಲಕ ಎಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.

2021 ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಇನ್ನು ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಏನಿದು ಘಟನೆ?
ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು 11 ವರ್ಷದ ನಿರಂಜನ್‌ ಎಂಬ ಬಾಲಕ ಮೃತಪಟ್ಟ ಘಟನೆ ಸೆ.22ರಂದು ನಡೆದಿತ್ತು. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಪುತ್ರ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಗೇಟ್ ಬಾಲಕನ ಮೇಲೆಯೇ ಬಿದ್ದಿತ್ತು. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಬಾಲಕನನ್ನು ಕೆ.ಸಿ. ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದ. ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ನಿರಂಜನ್ ತಂದೆ ವಿಜಯಕುಮಾರ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಪೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು.

ಕಾರಿನೊಳಗೆ ಕೊಳೆತ ಶವ ಪತ್ತೆ, ಕೊಲೆ ಶಂಕೆ

body found

ಚಾಮರಾಜನಗರ: ಚಾಮರಾಜನಗರ (Chamarajanagar news) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಕಾರಿನೊಳಗೆ ವ್ಯಕ್ತಿಯ ಕೊಳೆತ ಶವ (body found) ಪತ್ತೆಯಾಗಿದೆ. ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ (crime news) ಗಂಡಸಿನ ಶವ ಕಂಡುಬಂದಿದೆ.

ಸುಮಾರು 40ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಸ್ವಿಪ್ಟ್ ಕಾರಿನ ಹಿಂಬದಿ ಸೀಟ್ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಶವ ಕಂಡುಬಂದಿದೆ. ಕಾರಿನ ಡೋರ್‌ನಿಂದ ರಕ್ತ ಕೆಳಗಡೆ ಸುರಿದು ವಾಸನೆ ಬಂದದ್ದನ್ನು ಸಾರ್ವಜನಿಕರು ಗಮನಿಸಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಿಂದಾಗಿ ಶವವಿದ್ದುದು ಗೊತ್ತಾಗಿದೆ.

ಇದನ್ನೂ ಓದಿ: Murder Case: ಪ್ರೀತಿಸಿದ್ದು ಅಣ್ಣ, ಕೊಲೆಯಾದದ್ದು ತಮ್ಮ; ಹೆತ್ತವರ ಮುಂದೆಯೇ ಇರಿದು ಕೊಲೆ

ಕಾರಿನಲ್ಲಿದ್ದ ವ್ಯಕ್ತಿ ಬನಿಯನ್ ಹಾಗೂ ಚಡ್ಡಿ ಧರಿಸಿದ್ದ. ದೇಹ ಕೊಳೆತು ದುರ್ವಾಸನೆ ಬರುತ್ತಿತ್ತು. ವ್ಯಕ್ತಿ ಸತ್ತು ಎರಡು ದಿನಗಳು ಕಳೆದಿರಬಹುದು. ಇದು ಕೊಲೆ ಎಂದು ಶಂಕಿಸಲಾಗಿದೆ. ಕಾರಿನ ಕಿಟಕಿ ಬಾಗಿಲು ಸಂಪೂರ್ಣ ಬಂದ್‌ ಮಾಡಿ ಮಲಗಿದ್ದುದರಿಂದ ಉಸಿರುಗಟ್ಟಿ ಮೃತಪಟ್ಟಿರುವ ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯೂ ಇದೆ. ಪೊಲೀಸರಿಉ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಪಿಐ ಶಿವಮಾದಯ್ಯ, ಎಸ್‌ಐ ಸುಪ್ರೀತ್, ಕ್ರೈಂ ಪಿಎಸ್‌ಐ ಚಲುವರಾಜು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.