ಬೆಂಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ (Guest Teachers) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅತಿಥಿ ಶಿಕ್ಷಕರ ವೇತನ ಪಾವತಿಗೆ ಅನುದಾನ ಬಿಡುಗಡೆಯಾಗಿದ್ದು, 249.41 ಕೋಟಿ ರೂ.ಗಳು ಬಿಡುಗಡೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ.
ಈ ಬಗ್ಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ 24941.25 ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಅನುದಾನವನ್ನು ಸಂಬಂಧಪಟ್ಟ ತಾಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯಾದ್ಯಂತ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೇ ಪರದಾಡುತ್ತಿದ್ದರು. ಇದರಿಂದ ಸುಮಾರು 45ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಹೀಗಾಗಿ ಬಾಕಿ ವೇತನ ಬಿಡುಗಡೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ಒತ್ತಾಯಿಸಿತ್ತು. ಹೀಗಾಗಿ ರಾಜ್ಯ ಸರ್ಕಾರ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿದೆ.
ಇದನ್ನೂ ಓದಿ | Mysuru Dasara 2024: ಮೈಸೂರು ದಸರಾ ನೋಡಲು ಹೋದಾಗ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ!
ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ (Beauty Parlor Training) ಕುರಿತ 30 ದಿನಗಳ ಉಚಿತ ತರಬೇತಿಯು (Free Training) ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ?
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ.
ಉಚಿತ ಊಟ, ವಸತಿ ಸೌಲಭ್ಯ
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಈ ಸುದ್ದಿಯನ್ನೂ ಓದಿ | Bengaluru Power Cut : ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.