Thursday, 12th December 2024

ಶಾಸಕ ಸಿ.ಎಂ. ಉದಾಸಿ ನಿಧನ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ (77) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿ ದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗಷ್ಟೆ ಅವರ ಆರೋಗ್ಯ ಸ್ಥಿತಿ ಗಂಭೀರ ವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಅವರ ಪುತ್ರ ಮೇ 29ರಂದು ಮಾಹಿತಿ ನೀಡಿದ್ದರು.

ಬುಧವಾರ ಹಾನಗಲ್ ಗೆ ಮೃತದೇಹ ಕೊಂಡೊಯ್ದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರ, ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ.