Tuesday, 3rd December 2024

Hasanamba Darshan: ಇಂದು ಬಾಗಿಲು ತೆರೆದು ದರ್ಶನ ನೀಡಲಿರುವ ಹಾಸನಾಂಬೆ, ಜಾತ್ರೋತ್ಸವ ಆರಂಭ

hasanamba temple

ಹಾಸನ: ಹಾಸನದ ಪುರಾಣ ಪ್ರಸಿದ್ಧ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ (Hasanamba Jatrotsva) ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ದೇವಾಲಯದ ಗರ್ಭಗುಡಿ ಬಾಗಿಲು (Hasanamba Darshan) ತೆರೆಯಲಿದೆ. ವಿಶೇಷ ಹೂವಿನ ಅಲಂಕಾರದಿಂದ ದೇವಾಲಯ (Hasanamba Temple) ಕಂಗೊಳಿಸುತ್ತಿದ್ದು, ಹಾಸನ (Hasana news) ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಭಕ್ತರಲ್ಲಿ ಸಂಭ್ರಮ ಮನೆಮಾಡಿದೆ.

ಅರಸು ವಂಶಸ್ಥರು ಬನ್ನಿ ಕಡಿದ ನಂತರ ಗರ್ಭಗುಡಿ ಬಾಗಿಲು ತೆರೆಯಲಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ K.N.ರಾಜಣ್ಣ, ಶಾಸಕ ಸ್ವರೂಪ್‌ ಪ್ರಕಾಶ್, ಸಂಸದ ಶ್ರೇಯಸ್‌ ಪಟೇಲ್, ಹಾಸನ ಡಿಸಿ ಹಾಗೂ ಪೊಲೀಸ್​ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಿದೆ.

ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಇಂದು & ನ.3ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿದೆ. ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿಶೇಷ ಹೂವಿನ ಅಲಂಕಾರದಿಂದ ದೇವಾಲಯ ಕಂಗೊಳಿಸುತ್ತಿದೆ.

ಇದನ್ನೂ ಓದಿ: Hasanamba Jatre: ಅ.24ರಿಂದ ಹಾಸನಾಂಬ ಜಾತ್ರೆ; ದೇಗುಲಕ್ಕೆ ದೇವಿಯ ಒಡವೆಗಳು ರವಾನೆ