ಹಾವೇರಿ: ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ಹೆಸರಲ್ಲಿ ಗರುತಿಸಿಕೊಂಡು ಅಧಿಕಾರ ಅನುಭವಿಸಿ ಶಿಗ್ಗಾಂವಿ- ಸವಣೂರು ಬೈ ಎಲೆಕ್ಷನ್ ಸಮಯದಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿರುವ ಶ್ರೀಕಾಂತ್ ದುಂಡಿಗೌಡ್ರ ಹಾಗೂ ಸಂಗಮೇಶ ಕಂಬಾಳಿಮಠ ಅವರನ್ನು ಈ ದಿನದಿಂದಲೇ ಹಾವೇರಿ ಜಿಲ್ಲಾ (Haveri News) ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾ ವಕ್ತಾರರಾದ ಪರಮೇಶ್ವರಪ್ಪ ಮೇಗಳಮನಿ, ಬಿಜೆಪಿ ಪಕ್ಷ ಜನ ಸಿದ್ಧಾಂತಕ್ಕಾಗಿ ಸದಾ ಹೋರಾಟ ಮಾಡಿಕೊಂಡು ಬರುತ್ತಿದ್ದು, ಪಕ್ಷದಲ್ಲಿ ಗರ್ತಿಸಿಕೊಂಡು ಪಕ್ಷ ವಿರೋಧಿ ಕೆಲಸ ಮಾಡುವವರನ್ನು ಪಕ್ಷ ಎಂದು ಒಪ್ಪುವುದಿಲ್ಲ. ಇಂತಹ ಪಕ್ಷ ದ್ರೋಹ ಮಾಡಿರುವ ಈ ಇಬ್ಬರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | CM Siddaramaiah: ಅರಣ್ಯವಾಸಿ ಬುಡಕಟ್ಟು ಜನರಿಗೆ ಮೂಲ ಸೌಕರ್ಯ ಕಲ್ಪಿಸಿ: ಸಿಎಂ ಸೂಚನೆ
ಸಚಿವ ಜಮೀರ್ ಅಹ್ಮದ್‌ರನ್ನು ವಜಾಗೊಳಿಸಿ
ಬೆಂಗಳೂರು: ನಾಡಿನ ಅನ್ನದಾತರಿಗೆ ಸಂಕಟ ತಂದೊಡ್ಡಿರುವ ವಕ್ಫ್ ಕಾಯ್ದೆ ರದ್ದುಗೊಳಿಸಿ, ರಾಜ್ಯಾದ್ಯಂತ ಗೊಂದಲ ಸೃಷ್ಟಿಗೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ರೈತ ಗರ್ಜನೆ ರ‍್ಯಾಲಿಯಲ್ಲಿ ಮಾತನಾಡಿ, ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಎಚ್.ಪಿ.ನಾರಾಯಣರೆಡ್ಡಿ, ಬೆಂಗಳೂರು ದಕ್ಷಿಣ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಸಿ.ಕೆ ರಾಮಮೂರ್ತಿ, ಉತ್ತರ ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ವಿವಿಧ ಮಠಗಳ ಶ್ರೀಗಳು, ಕಿಸಾನ್ ಸಂಘದ ಪ್ರಮುಖರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಉಪಸ್ಥಿತರಿದ್ದರು.