Sunday, 15th December 2024

HD Kumaraswamy: 100 ಕೋಟಿಗೆ ಬೇಡಿಕೆ; ಎಚ್‌ಡಿಕೆ ವಿರುದ್ಧ ದೂರು ನೀಡಿದ್ದ ಉದ್ಯಮಿ ವಿರುದ್ಧ ಪ್ರತಿದೂರು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ 50 ಕೋಟಿ ರೂ. ಬೇಡಿಕೆ ಜತೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಉದ್ಯಮಿ ವಿಜಯ್ ಟಾಟಾ ವಿರುದ್ಧ ಇದೀಗ, ಜೆಡಿಎಸ್​ ಎಂಎಲ್‌ಸಿ ರಮೇಶ್​ಗೌಡ (HD Kumaraswamy) ಅಮೃತಹಳ್ಳಿ ಠಾಣೆಗೆ ಪ್ರತಿದೂರು ನೀಡಿದ್ದಾರೆ.

ಉದ್ಯಮಿ ವಿಜಯ್‌ ಟಾಟಾ 100 ಕೋಟಿ ರೂ. ಹಣ ಕೇಳಿದ್ದರು, ಇಲ್ಲ ಎಂದಿದ್ದಕ್ಕೆ ಆ.24ರಂದು ಮನೆಗೆ ಊಟಕ್ಕೆ ಕರೆದಾಗ ಬೆದರಿಕೆ ಹಾಕಿದ್ದರು. ನಾನು ಲಾಸ್​ನಲ್ಲಿದ್ದೇನೆ, ನನಗೆ ಹಣ ಬೇಕು. ನೀವು 100 ಕೋಟಿ ರೂ. ಕೊಡಬೇಕು, ಇಲ್ಲವಾದರೆ ನಿಮ್ಮನ್ನು ಮತ್ತು ಎ​ಚ್‌.ಡಿ. ಕುಮಾರಸ್ವಾಮಿಯನ್ನು ಬಿಡಲ್ಲ ಎಂದು ಎಂದು ಉದ್ಯಮಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನೂ ಓದಿ | CM Siddaramaiah: ಶಾಸಕ ಜಿ.ಟಿ.ದೇವೇಗೌಡ ಮಾತು ಸತ್ಯಕ್ಕೆ ಜಯ ಸಿಗಲಿದೆ ಎಂಬುದಕ್ಕೆ ಸಾಕ್ಷಿ: ಸಿದ್ದರಾಮಯ್ಯ

ಇನ್ನು ದೂರು ನೀಡಿರುವ ವಿಜಯ್ ಟಾಟಾ, ಹೊರಗಿನವರಲ್ಲ. 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಹೆಚ್​ಡಿ ಕುಮಾರಸ್ವಾಮಿ ಮತ್ತು ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: 50 ಕೋಟಿ ರೂಪಾಯಿ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಉದ್ಯಮಿ ವಿಜಯ್ ಟಾಟಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಇದರಿಂದ ಡಿನೋಟಿಫಿಕೇಷನ್, ಗಣಿಗಾರಿಕೆಗೆ ಅನುಮತಿ ಪ್ರಕರಣಗಳಲ್ಲಿ ಕಾನೂನು ಸಮರ ನಡೆಸುತ್ತಿರುವ ಕೇಂದ್ರ ಸಚಿವ ಎಚ್.​ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬಿಎನ್‌ಎಸ್‌ ಸೆಕ್ಷನ್ 3(5), 308(2), 351 (2) ಅಡಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಂಎಲ್‌ಸಿ ರಮೇಶ್‌ ಗೌಡ ವಿರುದ್ಧವೂ ಪ್ರಕರಣ ದಾಖಲಾಗಿದೆ. 50 ಕೋಟಿ ರೂ.ಗೆ ಬೇಡಿಕೆಯಿಟ್ಟು, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ದೂರು ದಾಖಲಿಸಿದ್ದರು.

ಜೆಡಿಎಸ್ ಮುಖಂಡರಾದ ರಮೇಶ್ ಗೌಡ ನಮ್ಮ ಮನೆಗೆ ಬಂದಿದ್ದರು. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದು ಹೇಳಿದ್ದರು. ಇದೇ ವೇಳೆ, ಎಚ್​​ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಡು ಎಂದು ದೂರಿನಲ್ಲಿ ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ | Zakir Naik: ಅನಾಥ ಹುಡುಗಿಯರನ್ನು ಮಗಳೆಂದು ಕರೆಯಲು ಸಾಧ್ಯವಿಲ್ಲ; ಅವರು ಮದುವೆಗೆ ಅರ್ಹರು- ಜಾಕಿರ್‌ ನಾಯ್ಕ್‌ ವಿವಾದ

ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ್ಮ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. 1 ವಾರದಿಂದ ರಮೇಶ್ ಗೌಡ ನಿರಂತರವಾಗಿ ಕಾಟ ಕೊಡುತ್ತಿದ್ದಾರೆ. 2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟ ಹೇಳಿದ್ದರು.