Thursday, 12th December 2024

HD Kumaraswamy: ಈ ಸರ್ಕಾರ 5 ವರ್ಷ ಇರಲ್ಲ, ಮತ್ತೆ ನಾನೇ ಸಿಎಂ ಆಗ್ತೇನೆ ಎಂದ ಎಚ್‌ಡಿಕೆ

HD Kumaraswamy

ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಈ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಬಯಸಿದರೆ ಮತ್ತೆ ಯಾಕೆ ನಾನು ಸಿಎಂ ಆಗಬಾರದು? ಜನ ಮತ್ತೆ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳುವ ಮೂಲಕ 3ನೇ ಬಾರಿ ಮುಖ್ಯಮಂತ್ರಿಯಾಗುವ ಆಸೆ ಬಿಚ್ಚಿಟ್ಟಿದ್ದಾರೆ.

ಈಗಿನ ಪರಿಸ್ಥಿತಿಯನ್ನು ನೋಡಿದರೆ ಜನರೇ ಸರ್ಕಾರವನ್ನು ತೆಗೆಯುತ್ತಾರೆ. 2028ರವರೆಗೆ ಈ ಸರ್ಕಾರವನ್ನು ಎಳೆಯುವುದೂ ಕಷ್ಟ. ಕಾರಣ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರಲ್ಲೇ ಅಸಮಧಾನವಿದ್ದು, ಯಾವಾಗ ಸ್ಫೋಟ ಆಗುತ್ತೆ ಗೊತ್ತಿಲ್ಲ. ಶಾಸಕರು ಹಳ್ಳಿ ಹಳ್ಳಿಗೆ ತೆರಳಿ ಕೆಲಸಗಳನ್ನು ಮಾಡಲೂ ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | SM Krishna Health Update: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?

ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು

ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ತಂದೆಯನ್ನು ಕಳೆದುಕೊಂಡ ಕೃತ್ತಿಕಾ ಅವರಿಗೆ BHEL ಕಂಪನಿಯಲ್ಲಿ ಉದ್ಯೋಗ ದೊರೆತಿದ್ದು, ಮಂಡ್ಯದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನೇರ ನೇಮಕಾತಿ ಆದೇಶ ಪತ್ರ ನೀಡಿದರು.

ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಎಂದು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಉದ್ಯೋಗ ಮೇಳದ ನಂತರ ಮಾತನಾಡಿದ ಕೇಂದ್ರ ಸಚಿವರು, ಉಳಿದ ಅಭ್ಯರ್ಥಿಗಳಿಗೆ ಡಿಸೆಂಬರ್ ತಿಂಗಳ ಒಳಗಾಗಿ ಉದ್ಯೋಗ ಕೊಡಿಸಲಾಗುವುದು. ಅದಕ್ಕಾಗಿ ಮಂಡ್ಯದ ಸಂಸದರ ಕಚೇರಿಯಲ್ಲಿ ಸುಸಜ್ಜಿತ ವಾರ್ ರೂಮ್ ತೆರೆಯಲಾಗುವುದು ಹಾಗೂ ದೆಹಲಿಯ ನನ್ನ ಸಚಿವಾಲಯದಲ್ಲಿ ವಿಶೇಷ ಸೆಲ್ ತೆರೆಯಲಾಗುವುದು. ಈ ಬಗ್ಗೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಮಂಡ್ಯದಲ್ಲಿ ಸಮರೋಪವಾದ ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಆಗಿದೆ. ನನಗೆ ಬಹಳ ಸಂತೋಷವಾಗಿದ್ದು, ನನ್ನ ಕ್ಷೇತ್ರದ, ರಾಜ್ಯದ ವಿವಿಧ ಜಿಲ್ಲೆಗಳ ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಸಿಕ್ಕಿದೆ ಎನ್ನುವ ಆತ್ಮತೃಪ್ತಿ ನನಗೆ ದೊರೆತಿದೆ ಎಂದು ಹೇಳಿದರು.

ಉದ್ಯೋಗ ಮಕ್ಕಳಿಗೆ, ಆ ಸಂತೋಷ ಅವರ ಪೋಷಕರಿಗೆ. ಇಂಥ ಒಂದು ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ಸಾರ್ಥಕ ಭಾವನೆ ನನ್ನದು. ಉದ್ಯೋಗ ಮೇಳದ ಯಶಸ್ಸು ನನಗೆ ಇನ್ನಷ್ಟು ಉತ್ತೇಜನ ನೀಡಿದೆ. ಜಿಲ್ಲೆಯ ಯಾವ ಮಕ್ಕಳು ಉದ್ಯೋಗಕ್ಕಾಗಿ ಅಳೆಯುವಂತ ಪರಿಸ್ಥಿತಿ ಬರಬಾರದು ಎಂದರು ಸಚಿವರು.

ಇದು ಆರಂಭ, ಮುಕ್ತಾಯ ಅಲ್ಲ

ಇದು ಆರಂಭ, ಮುಕ್ತಾಯ ಅಲ್ಲ. ಇಂತಹ ಉದ್ಯೋಗ ಮೇಳಗಳು ಮುಂದೆ ನಿರಂತರವಾಗಿ ನಡೆಯುತ್ತವೆ. ಈವರೆಗೆ ನನಗೆ ನನ್ನ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಎರಡು ದಿನಗಳ ಉದ್ಯೋಗ ಮೇಳದಲ್ಲಿ ಸುಮಾರು 6150ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇವೆ. ಈ ಪೈಕಿ 1,122 ಮಂದಿಗೆ ಖಚಿತವಾಗಿ ಉದ್ಯೋಗ ಸಿಕ್ಕಿದೆ. ನೇಮಕಾತಿ ಪತ್ರಗಳು ವಿತರಣೆಯಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ | New NCW Chief: ವಿಜಯ ಕಿಶೋರ್ ರಹತ್ಕರ್ ರಾಷ್ಟ್ರೀಯ ಮಹಿಳಾ ಆಯೋಗದ ನೂತನ ಮುಖ್ಯಸ್ಥೆ

ಡಿಸೆಂಬರ್ ಒಳಗೆ ಎಲ್ಲರಿಗೂ ಉದ್ಯೋಗ

ಬರುವ ದಿನಗಳಲ್ಲಿ ಉಳಿದ ಅರ್ಜಿಗಳನ್ನು ನಾವು ಫಾಲೋ ಅಪ್ ಮಾಡುತ್ತೇವೆ. ಅವರೆಲ್ಲರಿಗೂ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೇ, ಇವತ್ತಿಗೆ ನಿಲ್ಲುವುದಿಲ್ಲ. ಡಿಸೆಂಬರ್ ತಿಂಗಳವರೆಗೂ ಚಾಲ್ತಿಯಲ್ಲಿ ಇರಬೇಕು ಎಂದು ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ನಾನು ಮೊದಲೇ ಹೇಳಿದಂತೆ ಇದು ಶುಭಾರಂಭ ಅಷ್ಟೇ, ನಿರಂತರವಾಗಿ ಮುಂದುವರಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.