ಬೆಂಗಳೂರು : ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂ ಡಿದೆ.
ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿ, ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿದ್ದು, ಬಿಬಿಎಂಪಿ 277 ಕಟ್ಟಡ ತೆರವಿನ ಬಗ್ಗೆ ಮಾಹಿತಿ ನೀಡಬೇಕಿತ್ತು. ತೆರವು ಕುರಿತಂತೆ ತನಿಖೆ ಮಾಆಡಿ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು.
ರಾಜ್ಯ ಸರ್ಕಾರ ಜಿಲ್ಲಾವಾರು ಅನಧಿಕೃತ ಧಾರ್ಮಿಕ ಕಟ್ಟಡಗಳ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಬೇಕಿತ್ತು. ಹೀಗಾಗಿ, ವಾದಮಂಡನೆಗೆ ರಾಜ್ಯ ಸರ್ಕಾರ ಕಾಲಾವಕಾಶ ಕೇಳಿದ್ದು, ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂಡಿದೆ.