Saturday, 21st September 2024

Heart failure: 11 ವರ್ಷದ ಬಾಲಕ ಹೃದಯಾಘಾತದಿಂದ ಸಾವು; ಒಂದೇ ವಾರದಲ್ಲಿ 2ನೇ ಘಟನೆ

hassan news heart failure

ಹಾಸನ: ಮೊನ್ನೆ ರಾಯಚೂರಿನಲ್ಲಿ (Raichur news) 8ನೇ ತರಗತಿ ವಿದ್ಯಾರ್ಥಿಯೊಬ್ಬ ಲೋ ಬಿಪಿಯಿಂದ ಕುಸಿದು ಮೃತಪಟ್ಟ (Death news) ಘಟನೆಯ ಬೆನ್ನಿನಲ್ಲಿಯೇ, ಹಾಸನದ (Hassan news) ಆಲೂರಿನಲ್ಲಿಯೂ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (Heart failure) ಮೃತಪಟ್ಟಿದ್ದಾನೆ. ಇದು ಒಂದೇ ವಾರದಲ್ಲಿ ಸಂಭವಿಸುತ್ತಿರುವ ಎರಡನೇ ಘಟನೆಯಾಗಿದೆ.

ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ 11 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ (Death news) ಘಟನೆ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ಸಚಿನ್​ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಈ ವೇಳೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.

ಮಲಗಿದ್ದ ಮಗನನ್ನು ಮಾತನಾಡಿಸಲು ತಾಯಿ ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.

ಲೋ ಬಿಪಿಯಿಂದ ಬಾಲಕ ಸಾವು

ರಾಯಚೂರು: ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಲೋ ಬಿಪಿಯಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನ (Raichur News) ಸಿರವಾರದಲ್ಲಿ ನಡೆದಿದೆ. ತರಗತಿಯಲ್ಲಿ ಕುಳಿತಿದ್ದ ವೇಳೆ ಲೋ ಬಿಪಿಯಿಂದ ತಲೆ ಸುತ್ತು ಬಂದು 8 ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಶಿಕ್ಷಕರು ಅಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ಎಂಟನೇ ತರಗತಿ ವಿದ್ಯಾರ್ಥಿ ತರುಣ್ ಮೃತ ವಿದ್ಯಾರ್ಥಿ. ಈತ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸಿರವಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಸತ್ತ ನಾಯಿಯನ್ನು ಪಕ್ಕಕ್ಕೆ ಇಡುವ ವೇಳೆ ಅಪಘಾತ, ಓರ್ವ ಸಾವು, ಮತ್ತೊರ್ವನ ಸ್ಥಿತಿ ಗಂಭೀರ