Thursday, 12th December 2024

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.22ರವರೆಗೂ ಮಳೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ರಾಮನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬಜಾಲ್ ಪ್ರದೇಶದಲ್ಲಿ ಮನೆಯೊಂದು ಪೂರ್ಣ ವಾಗಿ ಜಖಂಗೊಂಡಿದೆ. ಬಂಗ್ರ ಕೂಳೂರಿನಲ್ಲಿ ಮಳೆಗೆ ಮನೆಯೊಂದು ಸಂಪೂರ್ಣ ಹಾನಿಗೀಡಾಗಿದೆ.

ಬೆಂಗಳೂರು ನಗರದಲ್ಲಿ ಇಂದಿನಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ದಕ್ಷಿಣ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ.

ಶಿರಾಲಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಬೀದರ್‍ನಲ್ಲಿ 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾದ ಪಶ್ಚಿಮ ಬಂಗಾಳ, ಉತ್ತರ ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕೇರಳದ ಕೆಲವು ಭಾಗಗಳು, ದಕ್ಷಿಣ ಒಳ ಕರ್ನಾಟಕ, ದಕ್ಷಿಣ ಛತ್ತೀಸ್‍ಗಢ್, ಲಕ್ಷದ್ವೀಪ, ವಿದರ್ಭ ಮತ್ತು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.