Wednesday, 11th December 2024

ಇಂದಿನಿಂದ ಜೂ.16 ರವರೆಗೆ ಗುಡುಗು, ಸಿಡಿಲು ಸಹಿತ ಮಳೆ ?

ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂ.16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಜೂ.16 ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.ಮೀ. ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಜೂ.14 ಮತ್ತು 15 ರಂದು ಹಾವೇರಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.