Monday, 25th November 2024

16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿ, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ. ದಕ್ಷಿಣ ಒಳನಾಡಿನ ಬಹು ತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಕ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬೆಂಗ ಳೂರಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಯಾಗುತ್ತಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕಡೆ ಸಾಗಲಿದ್ದು, ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮಂದಿನ 24 ಗಂಟೆಯಲ್ಲಿ ಮಳೆಯಾಗ ಬಹುದು ಎಂದು ಅಂದಾಜಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಮಳೆ ಅಕ್ಟೋರ್ಬ 17ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೇರಳ ಸರ್ಕಾರ ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣ ನಿರ್ಬಂಧಿಸಿದೆ.