Thursday, 12th December 2024

ಮುಷ್ಕರ ಬಿಟ್ಟು ಸಾರಿಗೆ ಸಂಚಾರ ಆರಂಭಿಸುವಂತೆ ಹೈಕೋರ್ಟ್‌ ನೋಟೀಸು

ಬೆಂಗಳೂರು : ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ ಮೂಲಭೂತ ಹಕ್ಕಾಗಿದೆ. ಈ ಹಕ್ಕಿಗೆ ಧಕ್ಕೆಯಾಗುವ ಹಿನ್ನಲೆಯಲ್ಲಿ ಮುಷ್ಕರ ಬಿಟ್ಟು ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಓಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ, ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ವ್ಯತ್ಯಯದಿಂದಾಗಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ. ಶೇ.44 ರಷ್ಟು ಬಸ್ ಸಂಚಾರ ಮಾತ್ರವೇ ಇದೆ. ಜನರು ತತ್ತರಿಸಿದ್ದಾರೆ. ಲಸಿಕಾ ಕೇಂದ್ರಕ್ಕೆ ಹೋಗೋದಕ್ಕೂ ಕಷ್ಟ ಆಗಿದೆ ಎಂದು ಅಭಿಪ್ರಾಯ ಪಟ್ಟಿದೆ.