ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ (Transport department) ವಾಹನ ಮಾಲಿಕರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದು ಗಡುವನ್ನು (HSRP Deadline) ಜನವರಿ 31 ರವರೆಗೆ ವಿಸ್ತರಿಸಿದೆ.
ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಇನ್ನೂ 1.40 ಕೋಟಿ ಹಳೆಯ ವಾಹನಗಳು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ.
ಯಾಕೆ ಎಚ್‌ಎಸ್‌ಆರ್‌ಪಿ?
ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.
ಹೆಚ್ಎಸ್ಆರ್ಪಿ ಅಳವಡಿಕೆ ಹೇಗೆ?
- https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
- ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
- ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
- ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
ಹೆಚ್‌ಎಸ್‌ಆರ್‌ಪಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. - ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
- ನಿಮ್ಮ ಅನುಕೂಲಕ್ಕೆ, ತಕ್ಕಂತೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
- ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
- ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.