Tuesday, 10th December 2024

HSRP number plate: ನ.20ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ

hsrp deadline

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ (HSRP number plate) ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ನವೆಂಬರ್.20ರವರೆಗೆ ಇದಕ್ಕೆ ಸಮಯ ನೀಡಲಾಗಿದೆ. ಈ ಅವಧಿಯೊಳಗೆ ಅಳವಡಿಸದೇ ಇದ್ದರೆ ದಂಡ ಕಟ್ಟುವುದಕ್ಕೆ ವಾಹನ ಸವಾರರು ಸಿದ್ಧರಾಗಿರಬೇಕಿದೆ.

ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲಾಗಿತ್ತು ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು. ಇಂಥವರು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
  • ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

ಇದನ್ನೂ ಓದಿ: HSRP Deadline: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಡೆಡ್‌ಲೈನ್‌ ಮತ್ತೆ ವಿಸ್ತರಣೆ, ವಿವರ ಇಲ್ಲಿದೆ