Thursday, 12th December 2024

ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರ್‌ ಉದ್ಘಾಟನೆ

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ, ಜಿಲ್ಲೆಯಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಸಸಿ ನೆಡುವುದರ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ ಸೇರಿದಂತೆ ಡಿವೈಎಸ್ಪಿ, ಸಿಪಿಐ ಮತ್ತಿತರರು ಉಪಸ್ಥಿತ ರಿದ್ದರು.