Saturday, 7th September 2024

ಅಸಂಘಟಿತ ವಲಯದ ಕಾರ್ಮಿಕರಿಗೆ ಭದ್ರತೆ ಒದಗಿಸಲು ವಿಮಾ ಯೋಜನೆ

ಬೆಂಗಳೂರು: ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ವಿಮಾ ಯೋಜನೆಯನ್ನು ಆಯವ್ಯಯ ದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ಆಟೋ ಚಾಲಕರು, ಚಾಲಕರು ಮತ್ತು ಲಾರಿ ಚಾಲಕರಿಗೆ ಹಾಗೂ ಡೆಲಿವರಿ ಸೇವೆ ನೀಡುತ್ತಿರುವವರ ಇ-ಕಾಮರ್ಸ್‌ನಡಿ ಭದ್ರತೆ ಒದಗಿಸುವ ದೃಷ್ಟಿಯಿಂದ, ಅವಲಂಬಿತರಿಗೆ ವಿಮೆ ಸೌಲಭ್ಯ ನೀಡಲಾಗುತ್ತದೆ.

ಇಂತಹವರು ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳ ವಿಮಾ ಸೌಲಭ್ಯ ಹಾಗೂ ಅಪಘಾತದಲ್ಲಿ ಮರಣ ಹೊಂದಿ ದಲ್ಲಿ 2 ಲಕ್ಷ ರೂ. ಗಳಂತೆ ಒಟ್ಟು 4 ಲಕ್ಷ ರೂ. ಗಳ ವಿಮಾ ಸೌಲಭ್ಯ ಕಲ್ಪಿಸಲು ‘ಮುಖ್ಯಮಂತ್ರಿ ವಿಮಾ ಯೋಜನೆ’ ಯನ್ನು ರೂಪಿಸಲಾಗುವುದು. ಇದರಿಂದ ಒಟ್ಟು 16.50 ಲಕ್ಷ ಜನರಿಗೆ ಸಹಾಯವಾಗುತ್ತದೆ ಎಂದು ಸಿಎಂ ಬಸವ ರಾಜ ಬೊಮ್ಮಾಯಿ ತಿಳಿಸಿದರು.

ತುಮಕೂರು, ಹಾವೇರಿ, ಯಲಹಂಕ, ಕಸ್ತೂರಿನಗರ, ಸಕಲೇಶಪುರ, ಕೆಜಿಎಫ್, ಚಿಂತಾಮಣಿ, ಸಾಗರ, ಗೋಕಾಕ್, ರಾಣೆಬೆನ್ನೂರು, ದಾಂಡೇಲಿ, ಶಿರಸಿ ಮತ್ತು ಭಾಲ್ಕಿ ನಗರಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ಒಟ್ಟು 85 ಕೋಟಿ ರೂ. ಗಳ ನಿಧಿಯ ಅನುದಾನದಿಂದ ವೆಚ್ಚದಲ್ಲಿ ರಸ್ತೆ ಸುರಕ್ಷತಾ ನಿರ್ಮಿಸಲಾಗುವುದು ಎಂದು ಘೋಷಣೆ ಮಾಡಿದರು.

error: Content is protected !!