Thursday, 12th December 2024

ಜವಾದ್ ಚಂಡಮಾರುತ: ರಾಜ್ಯಾದ್ಯಂತ ಡಿ. 6ರವರೆಗೆ ವರುಣನ ಆರ್ಭಟ

jawad cyclone
ಬೆಂಗಳೂರು: ಜವಾದ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ರಾಜ್ಯಾದ್ಯಂತ ಇಂದಿನಿಂದ ಡಿ. 6ರವರೆಗೆ ವರುಣನ ಆರ್ಭಟವಿರಲಿದೆ.

ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿಂದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚಂಡ ಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇಂದು ಜವಾದ್ ಚಂಡಮಾರುತ ಆರ್ಭಟಿಸ ಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ.6 ರವರೆಗೆ ವರುಣನ ಆರ್ಭಟವಿರಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ 845 ಕೋಟಿ ರೂ. ಹಾನಿಯಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜ ನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇಂದಿನಿಂದ 3 ದಿನ ರಾಜ್ಯಾದ್ಯಂತ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜವಾದ್ ಚಂಡಮಾರುತದಿಂದಾಗಿ, ಪಶ್ಚಿಮ ಬಂಗಾಳದ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಾಗೇ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳ ಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಚಂಡಮಾರುತಕ್ಕೆ ಈಗಾಗಲೇ ಜವಾದ್ ಎಂದು ಹೆಸರಿಡಲಾಗಿದೆ. ಜವಾದ್ ಎಂದರೆ ಅರೇಬಿಕ್ ಭಾಷೆಯಲ್ಲಿ ಉದಾರ ಅಥವಾ ಕರುಣಾಮಯಿ ಎಂದರ್ಥ.

ಭಾರತದಲ್ಲಿ ಇಂದಿನಿಂದ ಜವಾದ್ ಚಂಡಮಾರುತ ಅಪ್ಪಳಿಸುವುದರಿಂದ ಉನ್ನತ ಅಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಭಾರೀ ಮಳೆ ಯಾಗುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇಂದು ಜಮ್ಮು ಕಾಶ್ಮೀರ, ಲಡಾಖ್ ಭಾಗಗಳಲ್ಲಿ ಮಳೆ ಸುರಿಯಲಿದೆ. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.