Friday, 13th December 2024

ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಫರ್ಧೆ ಇಲ್ಲ: ಕುಮಾರ ಘೋಷಣೆ

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಸೋಲು ಕಂಡಿರುವಂತ ಜೆಡಿಎಸ್ ಪಕ್ಷ, ಇದೀಗ ಮುಂಬರುವಂತಹ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸದಿರುವ ನಿರ್ಧಾರ ಕೈಗೊಂಡಿ ದೆ.

ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗ ಮಾತನಾಡಿ, ಜೆಡಿಎಸ್ ವರಿಷ್ಠ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಮಸ್ಕಿ ಮತ್ತು ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ. ತಮ್ಮ ಪಕ್ಷದಿಂದ ಯಾವುದೇ ಅಭ್ಯರ್ಥಿಗಳು ಚುನಾವಣೆ ನಿಲ್ಲುವು ದಿಲ್ಲ ಎಂಬುದಾಗಿ ಘೋಷಣೆ ಮಾಡಿದ್ದಾರೆ.