ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಜ.19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿರುವ ಬಿಜಿಎಸ್ ಪದವಿ ಕಾಲೇಜಿನಲ್ಲಿ ರೈತರ ಮಕ್ಕಳಿಗಾಗಿ ಉಚಿತ ಉದ್ಯೋಗ ಮೇಳ (Job Fair) ಆಯೋಜಿಸಲಾಗಿದೆ.
ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ವಿವಿಧ ಕೋರ್ಸ್‌ಗಳ ಪದವಿ (ಪಾಸ್, ಫೇಲ್), ಐಟಿಐ, ಡಿಪ್ಲೋಮ, ಎಂಜಿನಿಯರಿಂಗ್, ಸ್ನಾತಕೋತರ ಪದವೀಧರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಈ ಸುದ್ದಿಯನ್ನೂ ಓದಿ | Job Guide: ನ್ಯಾಷನಲ್ ಹೈಡ್ರೋಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್‌ನ 118 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಉದ್ಯೋಗ ಮೇಳದಲ್ಲಿ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ. ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru Power Cut: ಡಿ.11, 12ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಹೆಚ್ಚಿನ ಮಾಹಿತಿಗಾಗಿ ಮೋಹನ್ ಮೊ.ಸಂ. 9686564192 ಮತ್ತು ಶಿವಕುಮಾರ್ ಮೊ.ಸಂ. 6363144181 ಗೆ ಸಂಪರ್ಕಿಸಬಹುದಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.