Friday, 22nd November 2024

Job Guide: GTTCಯಲ್ಲಿದೆ ಉದ್ಯೋಗಾವಕಾಶ; ಡಿಪ್ಲೊಮಾ ಪಾಸಾದವರು ಅರ್ಜಿ ಸಲ್ಲಿಸಿ

Job guide

ಬೆಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ (GTTC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 29 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಸೆಪ್ಟೆಂಬರ್‌ 28ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೊಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪನ್ಯಾಸಕ (ಎಂಜಿನಿಯರಿಂಗ್)- 30 ಹುದ್ದೆ, ವಿದ್ಯಾರ್ಹತೆ: ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ.
ಇಂಜಿನಿಯರ್- 2 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್ / ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಪದವಿ
ಆಫೀಸರ್ ಗ್ರೇಡ್-II- 2 ಹುದ್ದೆ, ವಿದ್ಯಾರ್ಹತೆ: ಕಲೆ / ವಿಜ್ಞಾನ / ಬಿಸಿನೆಸ್ ಅಡ್ಮಿನ್‌ನಲ್ಲಿ ಪದವಿ
ಫೋರ್‌ಮನ್‌ ಗ್ರೇಡ್-II- 4 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಟೂಲ್ & ಡೈ ಮೇಕಿಂಗ್
ಬೋಧಕ (Instructor) ಗ್ರೇಡ್-I- 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್
ಟೆಕ್ನಿಷಿಯನ್ ಗ್ರೇಡ್-II- 8 ಹುದ್ದೆ, ವಿದ್ಯಾರ್ಹತೆ: 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್
ಬೋಧಕ ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್
ಟೆಕ್ನಿಷಿಯನ್ ಗ್ರೇಡ್-III- 23 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಟೆಕ್ನಿಷಿಯನ್ ಗ್ರೇಡ್-IV- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್, ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆಯಲ್ಲಿ ಐಟಿಐ
ಸಹಾಯಕ (Assistant) ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಕಲೆ / ವಾಣಿಜ್ಯ / ವಿಜ್ಞಾನದಲ್ಲಿ ಪದವಿ, ಸೆಕ್ರೆಟರಿಯಲ್ ಪ್ರಾಕ್ಟೀಸ್ / ಮಾಡರ್ನ್ ಆಫೀಸ್ ಪ್ರಾಕ್ಟೀಸ್ / ಕಮರ್ಷಿಯಲ್ ಪ್ರಾಕ್ಟೀಸ್ / ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ18 ಮತ್ತು ಗರಿಷ್ಠ 27 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ಮತ್ತು ಎಸ್‌ಸಿ / ಎಸ್‌ಟಿ / ಕ್ಯಾಟಗರಿ-I / ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ವಿಭಾಗದ ಅಭ್ಯರ್ಥಿಗಳು 750 ರೂ., ಎಸ್‌ಸಿ / ಎಸ್‌ಟಿ / ಕ್ಯಾಟಗರಿ I / ಮಾಜಿ ಯೋಧರು 500 ರೂ., ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: gttc.karnataka.gov.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: RRB Recruitment 2024: ರೈಲ್ವೆ ರಿಕ್ರೂಟ್‌ಮೆಂಟ್‌ ಬೋರ್ಡ್‌ನಿಂದ 11,558 ಹುದ್ದೆ ಭರ್ತಿ; 12ನೇ ತರಗತಿ ಪಾಸಾದವರು ಅಪ್ಲೈ ಮಾಡಿ