ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇ-ಕೋರ್ಟ್ (Bengaluru Rural eCourt) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Bengaluru Rural District Court Recruitment 2025). 30 ಟೈಪಿಸ್ಟ್ (Typist) ಹುದ್ದೆಗಳಿವೆ. 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ 2025ರ ಜ. 6 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಟೈಪಿಸ್ಟ್ – 30 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ, ಡಿಪ್ಲೊಮಾ
ವಯೋಮಿತಿ
ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 38 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ/ಕ್ಯಾಟಗರಿ-I ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಕ್ಯಾಟಗರಿ -I/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಸುಲ್ಕ ಸಲ್ಲಿಸಬೇಕಾಗಿಲ್ಲ. ಅರ್ಜಿ ಶುಲ್ಕವಾಗಿ ಕ್ಯಾಟಗರಿ 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 100 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳು 200 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 21,400 ರೂ. – 42,000 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://recruitmenthck.kar.nic.in/district/bnr/typ/home.php) - ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅದಿಕೃತ ವೆಬ್‌ಸೈಟ್ ವಿಳಾಸ: bengalururural.dcourts.gov.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ