Thursday, 31st October 2024

ಡಿ.12ರಂದು ಬೃಹತ್‌ ಉದ್ಯೋಗ ಮೇಳ

ಕೆ.ಆರ್.ಪುರ: ಇದೇ 12ರಂದು ಶಾಂತಾ ಕೃಷ್ಣಮೂರ್ತಿ ಫೌಂಡೇಷನ್‌ ವತಿಯಿಂದ ಬೃಹತ್‌ ಉದ್ಯೋಗ ಮೇಳ  ಹಮ್ಮಿಕೊಳ್ಳ ಲಾಗಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿರುವುದರಿಂದ ಆ ಕುಟುಂಬಗಳು ಆರ್ಥಿಕ ವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಅವರಿಗೆ ನೆರವಾಗಲಿ ಎಂಬ ಉದ್ದೇಶದಿಂದ ಈ ಮೇಳ ಹಮ್ಮಿಕೊಳ್ಳ ಲಾಗಿದೆ’ ಎಂದು ಫೌಂಡೇಷನ್‌ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು.

ಇನ್ಫೊಸಿಸ್, ಐಬಿಎಂ, ಬಾಷ್, ಟೊಯೊಟಾ ಸೇರಿದಂತೆ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಸುಮಾರು ಐದು ಸಾವಿರ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಗುರಿ ಹೊಂದಿದ್ದೇವೆ’ ಎಂದರು.

ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ‘ಸಾಫ್ಟ್‌ವೇರ್‌, ಹಾರ್ಡ್‌ವೇರ್, ಸೇಲ್ಸ್, ಮಾರ್ಕೆಟಿಂಗ್, ಬಿಪಿಒ, ಬ್ಯಾಂಕಿಂಗ್, ಅಕೌಂಟಿಂಗ್, ಗ್ರಾಫಿಕ್ಸ್ ಡಿಸೈನಿಂಗ್, ರೀಟೈಲ್, ಮ್ಯಾನುಫ್ಯಾಕ್ಚರಿಂಗ್, ಮ್ಯಾನೇಜ್‌ಮೆಂಟ್ ಹಾಗೂ ಇನ್ನಿತರ ವಲಯಗಳ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಸುಮಾರು 1,200ಕ್ಕೂ ಹೆಚ್ಚು ಮಂದಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ’ ಎಂದರು.

ಎನ್‌ಆರ್‌ಐ ಲೇಔಟ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಮುಂಭಾಗದಲ್ಲಿ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮೇಳ ನಡೆಯಲಿದೆ.