Friday, 22nd November 2024

Job News: KPTCLನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ನ.20 ಕೊನೆಯ ದಿನ

kptcl

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ (KPTCL Recruitment 2024) ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು (Applications) ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (Job news, jobs alert) ನವೆಂಬರ್ 20 ಕೊನೆಯ ದಿನವಾಗಿದೆ.

ಈ ಕುರಿತಂತೆ ಕೆಪಿಟಿಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್‌ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ -https://kptcl.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Job News: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬರೋಬ್ಬರಿ 5,267 ಶಿಕ್ಷಕರ ನೇಮಕಾತಿಗೆ ಆದೇಶ