ಉಡುಪಿ: ರಾಜ್ಯಮಟ್ಟದ ಯುವ ಕಬಡ್ಡಿ ಆಟಗಾರ (Kabaddi player) ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯ ವೈಫಲ್ಯದಿಂದ (Heart Failure) ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು.
ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ. ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಮೃತರು ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿಯಾಗಿರುವ ಪ್ರೀತಮ್ ಶೆಟ್ಟಿ ಅತ್ಯುತ್ತಮ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದರು.