Saturday, 4th January 2025

Contractor death: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

G Parameshwara

ಬೀದರ್: ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor death) ಪ್ರಕರಣವನ್ನು ಸಿಐಡಿ ತನಿಖೆಗೆ (CID Enquiry) ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister Dr G Parameshwar) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

ಬೀದರ್‌ನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ (26) ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ರಾಜು ಕಪನೂರು ತನಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಬರೆದಿದ್ದ.

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು, ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Contractor Self Harming: ಬೀದರ್‌ನಲ್ಲಿ ಗುತ್ತಿಗೆದಾರನ ಆತ್ಮಹತ್ಯೆ, ಇಬ್ಬರು ಪೊಲೀಸರು ಸಸ್ಪೆಂಡ್‌