Friday, 13th December 2024

Kannada New Movie: ‘ಕಾಮಿಡಿ ಕಿಲಾಡಿ’ ಮಡೆನೂರ್ ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರಕ್ಕೆ ಚಾಲನೆ

Kannada New Movie

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ. ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ. ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು (Madenoor Manu) ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ (Kannada New Movie) ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕಿ ವಿದ್ಯಾ ಅವರೇ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

ಮುಹೂರ್ತ ಸಮಾರಂಭದಲ್ಲಿ ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ ಮಡೆನೂರು ಮನು ಹಾಗೂ ನಾಯಕಿ ಮೌನ ಗುಡ್ಡೆಮನೆ ಮುಂತಾದವರು ಉಪಸ್ಥಿತರಿದ್ದರು. ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ಸಂಗೀತ ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ. ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Bigg Boss Kannada 11: ನವರಾತ್ರಿ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಧರಿಸಿದ ಇಂಡೊ-ವೆಸ್ಟರ್ನ್ ಕುರ್ತಾ ಧೋತಿ ವಿಶೇಷತೆ ಏನು?

ಮಡೆನೂರ್ ಮನು, ಮೌನ ಗುಡ್ಡೆಮನೆ, ದಿಗಂತ್, ಸೋನಾಲ್ ಮೊಂತೆರೊ, ಶರತ್ ಲೋಹಿತಾಶ್ವ, ತಬಲ ನಾಣಿ, ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.