ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆ ಮುಖಂಡರು ಮಾ.೧೭ ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.
ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ. ನಾಳೆ ಇಡೀ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ವ್ಯಾಪಾರ, ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.
ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ನಾಯಕರು ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪಿನ ನಂತರ ಸಭೆ ನಡೆಸಿದ್ದರು. ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ಸಭೆ ನಡೆದಿತ್ತು.