Sunday, 15th December 2024

ಏಪ್ರಿಲ್‌ 17ರಂದು ಉಪಚುನಾವಣೆ, ಮೇ 2ರಂದು ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್‌ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮನಗೋಳಿಯಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕವಿನ್ನೂ ಘೋಷಣೆಯಾಗಿಲ್ಲ. ಬೆಳಗಾವಿ ಲೋಕಸಭಾ, ಬಸವ ಕಲ್ಯಾಣ, ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಮಾ.31ರೊಳಗೆ ನಾಮ ಪತ್ರ ಸಲ್ಲಿಸಬಹುದಾಗಿದೆ.

ಚುನಾವಣೆಯ ಫಲಿತಾಂಶ ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.